ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ನವೆಂಬರ್ ಮೊದಲ ವಾರದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಳೆಯಾಗುವ (Weather Report) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಿಂದ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ. ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ನವೆಂಬರ್ 2ರ ಬಳಿಕ ವ್ಯಾಪಕ ಮಳೆಯಾಗಲಿದೆ ಎಂದು ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.
ಇನ್ನು ಶನಿವಾರ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 14.40 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೀಗಾಗಿ ಚಳಿ ಸಹ ಮುಂದುವರಿದಿದೆ.
ಇದನ್ನೂ ಓದಿ | Appu Namana | ಪುನೀತ್ ಸಮಾಧಿ ದರ್ಶನ ಪಡೆದ 1.30 ಲಕ್ಷ ಮಂದಿ; ಇನ್ನೂ ಕರಗದ ಸರತಿ ಸಾಲು!