ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದ್ದು, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ರಿಲೀಫ್ ನೀಡಿದ್ದ ಮಳೆರಾಯ ಮಂಗಳವಾರ ಇಲ್ಲೂ ಅಬ್ಬರಿಸಲಿದ್ದಾನೆ. ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಸೇರಿ ಬೆಂಗಳೂರು, ಬೆಂ.ಗ್ರಾಮಾಂತರ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?
ಭಾನುವಾರ ಸುಬ್ರಹ್ಮಣ್ಯ 5 ಸೆಂ.ಮೀ, ಕೋಟ, ಕಲಘಟಗಿಯಲ್ಲಿ ತಲಾ 4, ಕಾರ್ಕಳ , ಜಯಪುರ ತಲಾ 3 ಹಾಗೂ ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಬಾಳೆಹೊನ್ನೂರು, ಕೊಟ್ಟಿಗೆಹಾರ ತಲಾ 2, ಕ್ಯಾಸಲ್ ರಾಕ್, ಮುಂಡಗೋಡು, ಧರ್ಮಸ್ಥಳ, ಕುಂದಾಪುರ, ಟಿ. ನರಸೀಪುರ, ಶಿವಮೊಗ್ಗ ತಲಾ 1 ಸೆಂ.ಮೀ ಮಳೆಯಾಗಿದೆ.
ಇದನ್ನೂ ಓದಿ | Elephant attack | ಚಿಕ್ಕಮಗಳೂರಲ್ಲಿ ಆಪರೇಷನ್ ಎಲಿಫೆಂಟ್; ಮೂರರಲ್ಲಿ ಒಂದು ಕಾಡಾನೆ ಸೆರೆ