Site icon Vistara News

Weather Report | ರಾಜ್ಯದಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

rain

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದು, ಮುಂದಿನ 48 ಗಂಟೆಯಲ್ಲಿ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಜತೆಗೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿದಂತೆ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಜಿಟಿ ಜಿಟಿ ಮಳೆಯಿಂದ ಶುರುವಾಗಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ಸೋಮವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆಯಿಂದ ಕೂಡಿತ್ತು. ಮದ್ದೂರು 5 ಸೆಂ.ಮೀ, ಚನ್ನಪಟ್ಟಣ 3 ಸೆಂ.ಮೀ, ರಾಮನಗರ 1 ಸೆಂ.ಮೀ.ನಷ್ಟು ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಾಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ ಉಷ್ಣಾಂಶ 34.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದರೆ, ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 11.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇದನ್ನೂ ಓದಿ | National Highway | ಬೆಂ-ಮೈ ದಶಪಥ ರಸ್ತೆಗಾಗಿ ಭೂ ಸ್ವಾಧೀನ; ಒಂದಿಂಚು ಜಾಸ್ತಿ ಮನೆ ಒಡೆದರೂ, ಕಲ್ಲಲ್ಲಿ ಹೊಡೀತೀನಿ!

Exit mobile version