Site icon Vistara News

Weather Report : ಆಗಸ್ಟ್‌ 1ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ

Rain in women

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 1 ರಿಂದ 5 ದಿನಗಳ ಕಾಲ ವ್ಯಾಪಕದಿಂದ ಮಧ್ಯಮ ಮಳೆಯಾಗುವ (Weather Report ) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿ. ಉಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: liquid lipsticks awareness : ಮಾನ್ಸೂನ್​​ನಲ್ಲಿ ಲಿಕ್ವಿಡ್‌ ಲಿಪ್​ಸ್ಟಿಕ್​ ಬಗ್ಗೆ ತಿಳಿದಿರಬೇಕಾದ 5 ಸಿಕ್ರೇಟ್ಸ್

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಸ್ಥಳಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ಸುತ್ತ ಮುತ್ತ ಅಲ್ಲಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 65 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version