ಬೆಂಗಳೂರು: ಕಳೆದ ಮೂರು ದಿನಗಳಿಂದ ವರುಣ (Rain News) ಅಬ್ಬರಿಸುತ್ತಿದ್ದು, ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಮುಂದಿನ ಮೂರು ಗಂಟೆಯೊಳಗೆ ಬೆಳಗಾವಿ, ಉತ್ತರ ಕನ್ನಡ, ಮೈಸೂರು ಹಾಗೂ ಮಂಡ್ಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain alert) ಎಚ್ಚರಿಕೆಯನ್ನು ನೀಡಲಾಗಿದೆ.
ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮರಗಳ ಬಳಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಮನೆಯಿಂದ ಹೊರಗೆ ಇರುವವರು ಆದಷ್ಟು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಸೂಚಿಸಲಾಗಿದೆ. ಗಾಳಿ, ಮಳೆ ಇರುವಾಗ ವಾಹನವನ್ನು ಚಲಾಯಿಸುವಾಗ ಎಚ್ಚರದಿಂದ ಇರುವಂತೆ ಸಲಹೆ ನೀಡಲಾಗಿದೆ.
ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ಶಿವಮೊಗ್ಗ ಮತ್ತು ತುಮಕೂರಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಅಬ್ಬರದ ಮಳೆಯಾಗುವ ಸಾಧ್ಯತೆ ಇದೆ.
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 41 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 29 ಡಿ.ಸೆ
ಮಂಗಳೂರು: 34 ಡಿ.ಸೆ – 26 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 23 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ