Weather Report : ಭಾನುವಾರವೂ ವರುಣ ಹಾಜರ್‌; ಎಲ್ಲೆಲ್ಲಿ ಮಳೆ ಮುನ್ಸೂಚನೆ? Vistara News

ಉಡುಪಿ

Weather Report : ಭಾನುವಾರವೂ ವರುಣ ಹಾಜರ್‌; ಎಲ್ಲೆಲ್ಲಿ ಮಳೆ ಮುನ್ಸೂಚನೆ?

Weather report : ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather updates) ನೀಡಿದೆ.

VISTARANEWS.COM


on

playing in the rain
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ (rain News) ಅಬ್ಬರ ಮುಂದುವರಿದಿದೆ. 11 ಜಿಲ್ಲೆಗಳಲ್ಲಿ ಭಾನುವಾರ (ಜು.23) ಅತಿ ಹೆಚ್ಚು ಮಳೆಯಾಗಲಿದೆ. ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ವರುಣಾರ್ಭಟ ಜೋರಾಗಿ ಇರಲಿದೆ. ಹಾಸನ ಜಿಲ್ಲೆಯಾದ್ಯಂತ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಕಲಬುರಗಿ ಹಾಗೂ ಯಾದಗಿರಿಯಲ್ಲೂ ಮಳೆಯ ಅಬ್ಬರ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ಕೆಲವೊಮ್ಮೆ ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬಿರುಗಾಳಿಯ ವೇಗವು ರಾಜ್ಯದಲ್ಲಿ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಕೊಡಗಿನಲ್ಲಿ ಮುಂದುವರಿದ ಮಳೆ, ಹಾರಂಗಿ ಜಲಾಶಯಕ್ಕೆ ನೀರಿನ ಹರಿವು ಹೆಚ್ಚಳ

ಕೊಡಗಿನಲ್ಲಿ ಮುಂದುವರಿದ ಗಾಳಿ, ಮಳೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ನದಿ, ಹಳ್ಳಕೊಳ್ಳಗಳು ತುಂಬಿ ತುಳುಕುತ್ತಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಗಾಳಿಯ ರಭಸಕ್ಕೆ ಮರಗಳು ಹಾಗೂ ಲೈಟ್ ಕಂಬಗಳು ಧರೆಗೆ ಉರುಳಿವೆ. ಸುಂಟ್ಟಿಕೊಪ್ಪದ ಪನ್ಯ ಬಳಿ ರಸ್ತೆಗೆ ಅಡ್ಡಲಾಗಿ ಮರ (Rain news) ಹಾಗೂ ಲೈಟ್ ಕಂಬಗಳು ಬಿದ್ದಿವೆ. ಮಲೆನಾಡಿನಲ್ಲೂ ಮಳೆಯಾಗುತ್ತಿದೆ.

ಸುಂಟಿಕೊಪ್ಪ ಮಾದಾಪುರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಮಳೆಯ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲವೆಡೆ ವಿದ್ಯುತ್ ಕಂಬಗಳ ಮೇಲೂ ಮರಗಳು ಮುರಿದು ಬಿದ್ದಿರುವುದನ್ನು ಈಗ ಕಾಣಬಹುದು. ಕೊಡಗಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಕೊಡಗಿನ ಕೆಲ ಕುಗ್ರಾಮಗಳು ಕಗ್ಗತ್ತಲಿನಲ್ಲಿ ಮುಳುಗಿವೆ. ಕಾವೇರಿ ಜಲಾನಯನ ಪ್ರದೇಶದಲ್ಲೂ ಶನಿವಾರದಿಂದ ಭಾರಿ ಮಳೆಯಾಗುತ್ತಿದೆ. ಮುಂದಿನ ಕೆಲ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: Monsoon Boots Fashion: ಮಾನ್ಸೂನ್‌ ಸೀಸನ್‌ ವೆಸ್ಟರ್ನ್ ಔಟ್‌ಫಿಟ್ಸ್ ಜೊತೆಯಾದ ಬೂಟ್ಸ್ ಫ್ಯಾಷನ್‌

ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. 10,000 ಕ್ಯೂಸೆಕ್ಸ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ. ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆಯಿಂದಲೂ ನೀರು ಬಿಡುಗಡೆ ಮಾಡಲಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಸ್ಟೋರೇಜ್‌ ಸಾಮರ್ಥ್ಯ 2,859 ಅಡಿಗಳಾಗಿದೆ. ಈಗಾಗಲೇ ಅಣೆಕಟ್ಟೆಯಲ್ಲಿ ನೀರಿನ ಮಟ್ಟ 2853 ಅಡಿಗೆ ಏರಿಕೆಯಾಗಿದೆ. ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲೂ ಶನಿವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆ ಹಿನ್ನಲೆಯಲ್ಲಿ ಕಾವೇರಿ ನದಿ ತುಂಬಿ‌ ಹರಿಯುತ್ತಿದೆ. ಕಾವೇರಿ ತ್ರಿವೇಣಿ ಸಂಗಮದ ಸ್ಥಾನ ಘಟಕ 2 ಮುಳುಗಡೆಯಾಗಿದೆ. ಭಾಗಮಂಡಲ-ನಾಪೋಕ್ಲು ರಸ್ತೆ 2 ಬಾರಿಗೆ ಜಲಾವೃತವಾಗಿದೆ. ರಸ್ತೆ ಮೇಲೆ 1 ಅಡಿ ನೀರು ಹರಿಯುತ್ತಿದೆ. ಭಾರಿ ಗಾತ್ರದ ವಾಹನ ಸಂಚಾರಕ್ಕೆ ಮಾತ್ರ ರಸ್ತೆಯಲ್ಲಿ‌ ಅವಕಾಶ ಕಲ್ಪಿಸಲಾಗಿದೆ.

ಮಳೆ ಹೀಗೆ ಮುಂದುವರೆದಲ್ಲಿ ಮಡಿಕೇರಿ ನಾಪೋಕ್ಲು ರಸ್ತೆ ಮೇಲು ನೀರು ತುಂಬುವ ಸಾಧ್ಯತೆ ಇದೆ. ಮುಂಜಾಗರೂಕತಾ ಕ್ರಮವಾಗಿ ಕಳೆದ ಒಂದು ತಿಂಗಳಿಂದ ಭಾಗಮಂಡಲದಲ್ಲಿ ಗೃಹ ರಕ್ಷಕ ದಳ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ.

ಹೇಮಾವತಿ ಜಲಾಶಯ: ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 12088 ಕ್ಯೂಸೆಕ್ ನೀರು ಹರಿದು ಬರುತ್ತಿವೆ. ಒಟ್ಟು ಜಲಾಶಯದ ಗರಿಷ್ಠ ಮಟ್ಟ – 2922 ಅಡಿಗಳಾಗಿದೆ. ಡ್ಯಾಂನ ಗರಿಷ್ಠ ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ 200 ಕ್ಯೂಸೆಕ್ ನಷ್ಟು ನೀರನ್ನು ನದಿಯಿಂದ ಹೊರಬಿಡಲಾಗುತ್ತಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 27 ಡಿ.ಸೆ – 23 ಡಿ.ಸೆ
ಗದಗ: 28 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 21 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮಳೆಯೊಂದಿಗೆ 30 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

Rain News : ಇನ್ನೆರಡು ದಿನಗಳು ಹಗುರ ಮಳೆಯೊಂದಿಗೆ ಥಂಡಿ ಗಾಳಿಯು ಬೀಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

women enjoying in rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಡಿ. 4-5ರಂದು ಮಳೆಯ ಸಿಂಚನವಾಗಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ ವೇಗದಲ್ಲಿ ನೆಲಗಾಳಿಯು ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (karnataka Weather Forecast) ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು, ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ರಾಯಚೂರಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ. ಕರಾವಳಿಯಲ್ಲಿ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಇರಲಿದ್ದು, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Cocktail finger ring : ಬ್ರೈಡಲ್‌ ಜ್ಯುವೆಲರಿ ಫ್ಯಾಷನ್‌ನಲ್ಲಿ ಎಥ್ನಿಕ್‌ ಕಾಕ್‌ಟೈಲ್‌ ಉಂಗುರಗಳ ಕಲರವ

ಕನಿಷ್ಠ ತಾಪಮಾನ ಏರಿಕೆ

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಕೆಲವೆಡೆ ಚಳಿಯು ಮೈ ನಡುಗಿಸಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 27 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka weather : ಸೈಕ್ಲೋನ್‌ ಎಫೆಕ್ಟ್‌; ನಾಳೆ ಮಳೆ ಜತೆಗೆ ಥಂಡಿ ಗಾಳಿ

Karnataka Weather Forecast : ಮಿಚುಂಗ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಮುಂದಿನ 24 ಗಂಟೆಯಲ್ಲಿ ಥಂಡಿ ಗಾಳಿ ಬೀಸಲಿದ್ದು, ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Rain alert
Koo

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣ (karnataka weather Forecast) ಇರಲಿದೆ. ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದ್ದು ಮಳೆಯಾಗುವ (Rain News) ನಿರೀಕ್ಷೆ ಇದೆ.

ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಹಗುರ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.

ಮೇಲ್ಮೈ ಗಾಳಿಯೊಂದಿಗೆ ಮಳೆ ಸಾಥ್‌

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 25 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ತಾಪಮಾನ ಎಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 16.0 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮಳೆಯಾಟ!

Rain News : ರಾಜ್ಯದ ಹಲವೆಡೆ ಸೂರ್ಯ ಮರೆಯಾಗಿ ಮಳೆಯ ಸಿಂಚನವಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain disrupted for two more days
Koo

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ (Rain News) ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಇತ್ತ ಬೆಂಗಳೂರಲ್ಲಿ ಮಳೆ ಸೂಚನೆ ಇದ್ದು ಟಿ-20 ಕ್ರಿಕೆಟ್‌ ಪಂದ್ಯಕ್ಕೆ ಮಳೆಯಡ್ಡಿಯಾಗುವ ಸಾಧ್ಯತೆ ಇದೆ.

ಮೈಸೂರು ಟು ಮಂಡ್ಯ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Velvet Lehenga Fashion: ವಿಂಟರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ವೆಲ್ವೆಟ್‌ ಲೆಹೆಂಗಾ ಜಾದೂ

ಸಣ್ಣ ಪ್ರಮಾಣದಲ್ಲಿ ವರ್ಷಧಾರೆ

ಮಲೆನಾಡಿನ ಹಾಸನ ಮತ್ತು ಕೊಡಗಿನಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಲ್ಲಿ ಕ್ರಿಕೆಟ್‌ಗೆ ಮಳೆ ಅಡ್ಡಿ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಭಾರತ -ಶ್ರೀಲಂಕಾ ಟಿ-20 ಪಂದ್ಯವಿದ್ದು, ಮಳೆಯು ಅಡ್ಡಿಯಾಗುವ ಆತಂಕ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಿನ ಪೂರ್ತಿ ಮರೆಯಾಗುವ ಸೂರ್ಯ; ಸಂಜೆಗೆ ಮಳೆಯ ಸಿಂಚನ

Rain News : ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ (Karnataka Weather Forecast) ಸೂಚನೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain alert karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಂಕಾಗಿದ್ದ ಮಳೆಯು ಕರಾವಳಿಯಲ್ಲಿ ಮತ್ತೆ ಸಕ್ರಿಯಗೊಳ್ಳುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆಯು (Rain News) ಮಾಯವಾಗಿದ್ದು, ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ ಮಳೆಯು (Karnataka Weather Forecast) ಮುಂದುವರಿಯಲಿದೆ. ಡಿ.3-4ರಂದು ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Star winter Fashion: ಸೀಸನ್‌ಗೆ ತಕ್ಕಂತೆ ಬದಲಾಯ್ತು ನಟಿ ಶಾನ್ವಿ ಶ್ರೀವಾತ್ಸವ್ ವಿಂಟರ್‌ ಫ್ಯಾಷನ್‌

ಬೆಂಗಳೂರಲ್ಲಿ ಘಳಿಗೆಗೊಂದು ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಸೂರ್ಯ ದರ್ಶನ ನೀಡಲಿದ್ದಾನೆ. ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಳಗಾವಿಯಲ್ಲಿ ಮಳೆಯ ಸಿಂಚನ

ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಬೆಳಗಾವಿಯ ಗೋಕಾಕ್‌ನಲ್ಲಿ 3 ಸೆಂ.ಮೀ ಹಾಗೂ ಚಿಕ್ಕೋಡಿ, ಸಂಕೇಶ್ವರ, ಹಾಗೂ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 15.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Car catches fire after hitting bus
ಕರ್ನಾಟಕ11 mins ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Michaung Cyclone
ಕರ್ನಾಟಕ28 mins ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema43 mins ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ50 mins ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ1 hour ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ1 hour ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ2 hours ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ2 hours ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ2 hours ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್2 hours ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ10 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌