Site icon Vistara News

Weather report : ಬೆಂಗಳೂರು ಸೇರಿ ಹಲವೆಡೆ ಬಿರುಗಾಳಿ ಸಹಿತ ಮಳೆ!

Rain girl standing in road

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ (weather report) ಮಳೆಯಾಗಲಿದೆ. ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ (Rain news) ಸೂಚನೆ ಇದೆ.

ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆ

ಉತ್ತರ ಒಳನಾಡಿನಲ್ಲಿ ಬಿಡುವಿಲ್ಲದಂತೆ ಮಳೆ ಸುರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ, ಬೆಳಗಾವಿ, ಬಳ್ಳಾರಿ, ಕಲಬುರಗಿ ಮತ್ತು ಯಾದಗಿರಿ, ಧಾರವಾಡ, ರಾಯಚೂರು, ಗದಗ, ಕೊಪ್ಪಳ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡಕ್ಕೆ ಅಲರ್ಟ್‌ ನೀಡಲಾಗಿದೆ. ಗುಡಗು, ಮಿಂಚು ಸಹಿತ ಬಿರುಗಾಳಿಯಿಂದ ಕೂಡಿದ ಮಳೆಯಾಗಲಿದ್ದು, ಗಾಳಿಗ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಬೆಂಗಳೂರಲ್ಲಿ ಥಂಡಿ ಗಾಳಿ

ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಆದರೆ ಗಾಳಿಯ ವೇಗ ಹೆಚ್ಚಾಗಲಿದೆ. ಹೀಗಾಗಿ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 28 ಡಿ.ಸೆ – 24 ಡಿ.ಸೆ
ಬೆಳಗಾವಿ: 31 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 4ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0422.4739176486
ಆಲಮಟ್ಟಿ ಜಲಾಶಯ
(Almatti Dam)
519.6122.3157253689
ಮಲಪ್ರಭಾ ಜಲಾಶಯ (Malaprabha Dam)633.8021.9801694
ಘಟಪ್ರಭಾ ಜಲಾಶಯ
(Ghataprabha Dam)
662.9141.44750186
ತುಂಗಾಭದ್ರಾ ಜಲಾಶಯ (Tungabhadra Dam)497.7174.5254210598
ಭದ್ರಾ ಜಲಾಶಯ (Bhadra Dam)657.7346.253883224
ಕಬಿನಿ ಜಲಾಶಯ (Kabini Dam)696.1313.608551000
ಹಾರಂಗಿ
(Harangi Dam)
871.387.254041700
ಲಿಂಗನಮಕ್ಕಿ (Linganamakki Dam) 554.4468.5011495458
ಹೇಮಾವತಿ
(Hemavathi Dam)
890.5823.547745800
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version