Site icon Vistara News

Weather Report : ಕರಾವಳಿಯಲ್ಲಿ ನಾಳೆ ಗುಡುಗು ಸಹಿತ ವ್ಯಾಪಕ ಮಳೆ

Rain image

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ (Weather report) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಸ್ಥಳಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗಲಿದೆ.

ಇದನ್ನೂ ಓದಿ: Monsoon Nail Art: ನೇಲ್‌ ಆರ್ಟ್‌ಗೂ ಲಗ್ಗೆ ಇಟ್ಟ ಮಾನ್ಸೂನ್‌ ಚಿತ್ತಾರ!

ಬೆಂಗಳೂರಲ್ಲಿ ಕವಿಯಲಿದೆ ಮೋಡ

ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕಡಲಿನಲ್ಲಿ ಗಾಳಿ ವೇಗ ಹೆಚ್ಚು

ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗವು ಗಂಟೆಗೆ 65 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version