Site icon Vistara News

Weather Report : ಬೆಂಗಳೂರಲ್ಲಿ ದಿನವಿಡೀ ಜಿಟಿ ಜಿಟಿ ಮಳೆ; ಕರಾವಳಿಗೆ ರೆಡ್‌ ಅಲರ್ಟ್‌!

Rain News

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸೂರ್ಯನ ದರ್ಶನಕ್ಕೆ ಮೋಡಗಳು ಅಡ್ಡಿಯಾಗಲಿದ್ದು, ದಿನವಿಡೀ ಜಿಟಿ ಜಿಟಿ (Rain News) ಮಳೆಯಾಗಲಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗಲಿದ್ದು, ರೆಡ್‌ ಅಲರ್ಟ್‌ (weather report)ನೀಡಲಾಗಿದೆ. ಜು.26ರಂದು ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದ ಸುತ್ತಮುತ್ತ ಮೋಡ ಕವಿದ ಆಕಾಶವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಇದನ್ನೂ ಓದಿ: Rain News: ತುಂಬಿ ಹರಿದ ನದಿಗಳು, ವರದಾ ನದಿಯಲ್ಲಿ ತೇಲಿ ಬಂದ ಶವ!

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 26 ಡಿ.ಸೆ – 23 ಡಿ.ಸೆ
ಗದಗ: 25 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 25 ಡಿ.ಸೆ – 21 ಡಿ.ಸೆ
ಬೆಳಗಾವಿ: 25 ಡಿ.ಸೆ – 21 ಡಿ.ಸೆ
ಕಾರವಾರ: 28 ಡಿ.ಸೆ – 25 ಡಿ.ಸೆ
ಮಂಗಳೂರು: 26 ಡಿ.ಸೆ – 22 ಡಿ.ಸೆ
ಹೊನ್ನಾವರ: 27 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 25 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version