ಬೆಂಗಳೂರು: ವಾರಾಂತ್ಯದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Weather report) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತುಂತುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Success Story: ಕನಸೆಂಬ ಕುದುರೆಯನೇರಿ; ಕೈ ಇಲ್ಲದಿದ್ದರೂ ಛಲದಿಂದ ಓದಿ JEE ರ‍್ಯಾಂಕ್ ಪಡೆದ ಸ್ನೇಹಾ ಬೆಹೆರಾ
ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ಹಾವೇರಿ, ಗದಗ ಮತ್ತು ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಸ್ಥಳಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 28 ಡಿ.ಸೆ – 23 ಡಿ.ಸೆ
ಗದಗ: 28 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 21 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಹೊನ್ನಾವರ: 28 ಡಿ.ಸೆ- 23 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ