Site icon Vistara News

Weather Report : ಬೆಂಗಳೂರಲ್ಲಿ ತುಂತುರು, ಕರಾವಳಿಯಲ್ಲಿ ವ್ಯಾಪಕ ಮಳೆ

Rain in beach

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕದಿಂದ ಲಘು ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಇದನ್ನೂ ಓದಿ: Assault Case : ಮಕ್ಕಳಿಗೆ ಬಲವಂತವಾಗಿ ವಿಷ ಕುಡಿಸಿ ಕಿಡಿಗೇಡಿಗಳು ಪರಾರಿ

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಬೆಂಗಳೂರಲ್ಲಿ ಕೆಲವೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಒಂದೆರಡು ಬಾರಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ರಾಜ್ಯದಲ್ಲಿ ಗುರುವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 5; ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) 3; ಕೊಲ್ಲೂರು (ಉಡುಪಿ ಜಿಲ್ಲೆ), ಅಂಕೋಲ, ಕದ್ರಾ, ಸಿದ್ದಾಪುರ, ಬೇಲಿಕೇರಿ ( ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ಅಗ್ರಹಾರ ಕೋನಂದೂರು (ಶಿವಮೊಗ್ಗ ಜಿಲ್ಲೆ) ತಲಾ 2; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಗೇರುಸೊಪ್ಪ, ಕುಮಟಾ, ಬನವಾಸಿ, ಮಂಚಿಕೇರಿ, ಜೋಯಿಡಾ, ಜಗಲ್ಬೇಟ್ (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಶೃಂಗೇರಿ, ಕೊಪ್ಪ, ಕಮ್ಮರಡಿ (ಎಲ್ಲವೂ ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಬೆಳಗಾವಿ ನಗರ, ಮಂಡಗದ್ದೆ (ಶಿವಮೊಗ್ಗ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version