Site icon Vistara News

Weather Report : ಕೊಡಗು, ಚಿಕ್ಕಮಗಳೂರು ಸೇರಿ ಕರಾವಳಿಯಲ್ಲಿ ಜೋರು ಮಳೆ

Man walking In Heavy Rain

ಬೆಂಗಳೂರು: ಕರಾವಳಿಯಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದರೆ, ಮಲೆನಾಡು ಹಾಗೂ ಒಳನಾಡಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ (Weather report) ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳದಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆ ಅಬ್ಬರ ಇರಲಿದೆ.

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಪ್ರದೇಶದ ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗಲಿದೆ. ಬೆಂಗಳೂರಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Black Magic : ಅಮಾವಾಸ್ಯೆಯಂದು ಮಾಟ ಮಂತ್ರ; ತಲೆಬುರಡೆ, ನಿಂಬೆ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗುವ ಸಂಭವವಿದೆ. ಧಾರವಾಡ, ಹಾವೇರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version