ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಧಾರಾಕಾರ ಮಳೆಯಾಗಲಿದೆ. ಜತೆಗೆ ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Heavy Rain | ಮಳೆ ಅನಾಹುತಕ್ಕೆ ಪ್ರತ್ಯೇಕ ಕಡೆ ವೃದ್ಧೆಯರಿಬ್ಬರು ಸಾವು