ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ.
ರಾಜ್ಯದಲ್ಲಿ ಹಲವೆಡೆ ಮುಂದಿನ ಎರಡು ದಿನಗಳ ಕಾಲವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಪರಿಣಾಮವಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಂಚಾರಕ್ಕೂ ತೊಂದರೆಯಾಗಿದೆ. ಈಗಾಗಲೇ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಶನಿವಾರವೂ ಭಾರಿ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Weather Report: ರಾಜ್ಯದಲ್ಲಿ ಇನ್ನೆರಡು ದಿನ ಅಬ್ಬರಿಸಲಿರುವ ಮಳೆರಾಯ