Site icon Vistara News

Weather Report | ರಾಜ್ಯದಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Rain News

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮಳೆ ಅಬ್ಬರ ಸೋಮವಾರವೂ ಮುಂದುವರಿಯಲಿದೆ ಎಂದು (Weather Report) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ ಇರಲಿದ್ದು, ಇದು 65 ಕಿ.ಮೀ.ವರೆಗೂ ತಲುಪುವ ಸಾಧ್ಯತೆಯಿದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಕಲಬುರುಗಿ, ಯಾದಗಿರಿ ಹಾಗೂ ಬೆಳಗಾವಿ, ವಿಜಯಪುರದಲ್ಲಿ ವ್ಯಾಪಕ ಮಳೆಯಾಗಲಿದೆ.

ಜತೆಗೆ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗದಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಕೆಲವು ಕಡೆ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ | Heavy Rain | ಮಳೆಯ ರಭಸಕ್ಕೆ ಸರ್ಕಾರಿ ಶಾಲೆಯ ಚಾವಣಿ ಕುಸಿತ, ಪಂಚಾಯಿತಿ ಕಟ್ಟದ ನೆಲಸಮ

Exit mobile version