Site icon Vistara News

Weather Report | ರಾಜ್ಯಾದ್ಯಂತ ಗುರುವಾರ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

rain

ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲಿದೆ.

ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ | Weather Report: ಭಾರಿ ಮಳೆ ಅಲರ್ಟ್‌, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗಲಿದೆ.

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿಯೂ ಅಲ್ಲಲ್ಲಿ ಅತಿಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ | Weather Report: ಮುಂದಿನ 5 ದಿನ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

Exit mobile version