Site icon Vistara News

Weather Report: ರಾಜ್ಯದಲ್ಲಿ ಇನ್ನೆರಡು ದಿನ ಅಬ್ಬರಿಸಲಿರುವ ಮಳೆರಾಯ

rain

ಬೆಂಗಳೂರು: ರಾಜ್ಯಾದ್ಯಂತ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿಯ ವೇಗವು 30-40 ಕಿ.ಮೀ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಅಧಿಕ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಚದುರಿದ ಮಳೆಯಾಗಲಿದೆ.

ಇದನ್ನೂ ಓದಿ | Weather Report | ರಾಜ್ಯಾದ್ಯಂತ ಗುರುವಾರ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬಾಗಲಕೋಟೆ, ಬಿಜಾಪುರ, ಬಳ್ಳಾರಿ ಹಾಗೂ ಧಾರವಾಡ, ಹಾವೇರಿ, ಗದಗ, ಗುಲ್ಬರ್ಗಾ, ಕೊಪ್ಪಳ , ರಾಯಚೂರು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು,ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಸಾಧಾರಣದಿಂದ ಭಾರೀ ಮಳೆಯಾಗಲಿರುವ ಕುರಿತು ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | Weather Report: ಭಾರಿ ಮಳೆ ಅಲರ್ಟ್‌, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

Exit mobile version