Site icon Vistara News

Weather Report : ಇಂದಿನಿಂದ ಐದು ದಿನ ಭಾರಿ ಮಳೆ; ಎಲ್ಲೆಲ್ಲಿ ವರುಣಾರ್ಭಟ

Rain Image

ಬೆಂಗಳೂರು : ಜು.21 ರಿಂದ 25 ರವರೆಗೆ ಉತ್ತರ ಒಳನಾಡು, ಕರಾವಳಿ ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಯಲ್ಲಿ ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ಬಳ್ಳಾರಿ, ಧಾರವಾಡ, ರಾಯಚೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ.

ಉತ್ತರ ಒಳನಾಡಲ್ಲಿ ಬಿರುಗಾಳಿ ಮಳೆ ಎಚ್ಚರಿಕೆ

ಉತ್ತರ ಕನ್ನಡಕ್ಕೆ ಆರೆಂಜ್‌ ಆಲರ್ಟ್‌, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 4 ದಿನಗಳಿಗೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿಗೆ, ಕೊಪ್ಪಳ, ರಾಯಚೂರು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು ಹಾಗೂ ಬೆಂಗಳೂರು, ಬೆಂಗಳೂರು ಗ್ರಾಮಾಂತರಕ್ಕೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾವೇರಿ, ಗದಗ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Rain News: ಮಹಾರಾಷ್ಟ್ರದಲ್ಲಿ ಮಳೆ, ಉತ್ತರ ಕರ್ನಾಟಕದಲ್ಲಿ ತುಂಬಿದ ಕೃಷ್ಣೆ, ಸೇತುವೆಗಳು ಮುಳುಗಡೆ

ಗುಡುಗು ಮುನ್ನೆಚ್ಚರಿಕೆ

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು 40-50 ಕಿ.ಮೀ. ಇರುವ ಸಾಧ್ಯತೆ ಇದೆ. ಕರಾವಳಿಯಲ್ಲಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಗದಗ: 26 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 25 ಡಿ.ಸೆ – 20 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version