ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮುಂದಿನ 24 ಗಂಟೆಯಲ್ಲಿ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ. ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ ತಲುಪುವ ಸಾಧ್ಯತೆಯಿದ್ದು, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರುಗಿ, ಯಾದಗಿರಿ, ಬೆಳಗಾವಿ, ರಾಯಚೂರು, ವಿಜಯಪುರದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡಿನ ದಾವಣಗೆರೆ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಕೆಲವು ಕಡೆ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Rain News | ಮಳೆ ಹಾನಿ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆಗೆ 200 ಕೋಟಿ ರೂ. ಬಿಡುಗಡೆ