ರಾಜ್ಯ: ನೈರುತ್ಯ ಮುಂಗಾರು ಅಬ್ಬರಿಸುತ್ತಿದ್ದು, ಜುಲೈ 19-20ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Weather Report) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬೀದರ್ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಮಗುವಿನ ಪ್ರಾಣ ರಕ್ಷಿಸಿದ ಆಟೋ ಚಾಲಕ