Site icon Vistara News

Weather Report : ನಾಳೆ ಕರಾವಳಿಯಲ್ಲಿ ಸಿಕ್ಕಾಪಟ್ಟೆ ಮಳೆ; ಬೆಂಗಳೂರಿನಲ್ಲೂ ಸಂಜೆಗೆ ವರ್ಷಧಾರೆ

Boy Standing in beach with holding umbrela

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗುವ (Rain News) ಇದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಲ್ಲಿ ಜಿಟಿ ಜಿಟಿ ಮಳೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Fraud Case : ಕೈ ಕೊಟ್ಟು ಕಾಲ್ಕಿತ್ತ ಸೆಕೆಂಡ್‌ ಹ್ಯಾಂಡ್‌ ವೈಫ್‌!

ಉತ್ತರ ಒಳನಾಡಲ್ಲಿ ದುರ್ಬಲ; ಕರಾವಳಿಯಲ್ಲಿ ಚುರುಕು

ರಾಜ್ಯದಲ್ಲಿ ಶನಿವಾರ ನೈರುತ್ಯ ಮುಂಗಾರು ಕರಾವಳಿಯಲ್ಲಿ ಚುರುಕಾಗಿತ್ತು. ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯಲ್ಲಿ ವ್ಯಾಪಕ ಮಳೆಯಾದರೆ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.

ಸಿದ್ದಾಪುರದಲ್ಲಿ ಭಾರಿ ಮಳೆಯಾಗಿದ್ದು, ಗೇರುಸೊಪ್ಪದಲ್ಲಿ 6 ಸೆಂ.ಮೀ ಮಳೆಯಾಗಿದೆ. ಕೊಲ್ಲೂರು, ಕೋಟ, ಕುಮಟಾ, ಕ್ಯಾಸಲ್ ರಾಕ್, ಹೊನ್ನಾವರ, ಶಿರಾಲಿ, ಬೆಳ್ತಂಗಡಿ ತಲಾ 5 ಸೆಂ.ಮೀ, ಮಣಿ 4 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು , ಕದ್ರಾ, ಕಮ್ಮರಡಿಯಲ್ಲಿ ತಲಾ 3 ಸೆಂ.ಮೀ ಹಾಗೂ ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು ಎಚ್‌ಎಂಎಸ್, ಉಪ್ಪಿನಂಗಡಿ, ಕುಂದಾಪುರ, ಕಾರ್ಕಳ, ಸಿದ್ದಾಪುರ, ಕಾರವಾರ, ಮಂಕಿ, ಉಡುಪಿ, ಚಿಕ್ಕಬಳ್ಳಾಪುರ, ತೊಂಡೆಭಾವಿ , ಕೊಪ್ಪ, ತುಮಕೂರು, ಬೆಂಗಳೂರು ವಿಮಾನ ನಿಲ್ದಾಣ, ಲಿಂಗನಮಕ್ಕಿ ಎಚ್‌ಎಂಎಸ್, ತಾಳಗುಪ್ಪದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಮಂಚಿಕೆರೆ, ಅಂಕೋಲಾ, ಜೋಯಿಡಾ, ಯಲ್ಲಾಪುರ, ಚಿಂತಾಮಣಿ, ಸಂತೆಬೆನ್ನೂರು, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಧುಗಿರಿ, ಹುಂಚದಕಟ್ಟೆ, ಎನ್ ಆರ್ ಪುರ, ಪರಶುರಾಂಪುರ, ಭಾಗಮಂಡಲ, ಕೋಲಾರ ಪಿಡಬ್ಲ್ಯೂಡಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version