Site icon Vistara News

Weather Report: ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

rain

ಬೆಂಗಳೂರು: ಕಳೆದೊಂದು ವಾರದಿಂದ ಮಳೆಯ ಸಿಂಚನವಾಗುತ್ತಿದ್ದು, ಭಾನುವಾರ ಮತ್ತು ಸೋಮವಾರವೂ ವರುಣ ಅಬ್ಬರಿಸಲಿದ್ದಾನೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿ ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಗದಗ ಹಾಗೂ ಬಾಗಲಕೋಟೆ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Election 2023: ಬಿಜೆಪಿಗಾಗಿ ಕರ್ನಾಟಕದ ಜನರೇ ಚುನಾವಣೆ ಮಾಡುತ್ತಿದ್ದಾರೆ ಎಂದ ಪ್ರಧಾನಿ ಮೋದಿ

ರಾಜ್ಯಾದ್ಯಂತ ಗುರುವಾರ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೀದರ್‌ನಲ್ಲಿ 5 ಸೆಂ.ಮೀ ಮಳೆಯಾಗಿದೆ. ಹುಮನಾಬಾದ್ , ಕೆವಿಕೆ ತಲಾ 4 ಸೆಂ.ಮೀ ಮಳೆಯಾಗಲಿದೆ. ನಿಂಬರ್ಗಾ ತಾಂಡಾ, ಕೋಲಾರ, ಕೊನೇಹಳ್ಳಿ, ಕೆವಿಕೆ ತಲಾ 3 ಮತ್ತು ಕಮಲಾಪುರ, ಸುಲೇಪೇಟೆ, ಹಲಬರ್ಗಾ, ತಿಪಟೂರು, ಮಿಡಿಗೇಶಿ, ಕಾಟಿಕೆರೆ, ಹೊಳೆಹೊನ್ನೂರು, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 36.6 ಡಿಗ್ರಿ ಸೆಲ್ಸಿಯಸ್‌ ಕಲಬುರಗಿಯಲ್ಲಿ ದಾಖಲಾಗಿದೆ.

Exit mobile version