Site icon Vistara News

Weather Report : ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ; ನಾಲ್ಕು ಜಿಲ್ಲೆಗಳಿಗೆ ಅಲರ್ಟ್‌

Rain

#image_title

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ (Rain News) ಮಳೆಯಾಗುತ್ತಿದ್ದು, ಇನ್ನೆರಡು ದಿನವೂ ಮಳೆ (Weather report) ಇರಲಿದೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಚಿಕ್ಕಬಳ್ಳಾಪುರದಲ್ಲಿ ಗುರುವಾರ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ತಲುಪಲಿದೆ. ಇನ್ನು ಬೆಂಗಳೂರಲ್ಲಿ ಮುಂಜಾನೆ ಬಿಸಿಲಿನಿಂದ ಕೂಡಿದರೆ ಮಧ್ಯಾಹ್ನದ ವೇಳೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಧಾರಾಕಾರ ಮಳೆಯಾಗಲಿದೆ. ಗಾಳಿಯ ವೇಗವು ಒಳನಾಡಿನಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ಮತ್ತು ಕರಾವಳಿಯಲ್ಲಿ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸುರಿಯಲಿದ್ದು, ಸಂಜೆ ವೇಳೆಗೆ ಹೊರಗೆ ಹೋಗುವವರು ಎಚ್ಚರಿಕೆಯನ್ನು ವಹಿಸಲು ಸೂಚನೆ ನೀಡಲಾಗಿದೆ. ಸಂಜೆ ವೇಳೆಗೆ ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಹೆಚ್ಚು ಇರುವುದರಿಂದ ಈ ವೇಳೆ ವಾಹನಗಳಲ್ಲಿ ಹೊರಗೆ ಹೋಗುವುದು, ಮರದ ಕೆಳಗೆ ಆಶ್ರಯ ಪಡೆಯುವುದು, ಹೊಲಗಳಲ್ಲಿ ಕೆಲಸ ಮಾಡುವುದು ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ತೊಡಗುವಾಗ ಮುಂಜಾಗ್ರತೆ ವಹಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ:Mangalore airport: ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 41 ಡಿ.ಸೆ – 22 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 28 ಡಿ.ಸೆ
ಮಂಗಳೂರು: 34 ಡಿ.ಸೆ – 24 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 21 ಡಿ.ಸೆ‌

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version