ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ತಲುಪುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಮಳೆಯ ಮುನ್ಸೂಚನೆಯಿಲ್ಲ. ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಕೊಪ್ಪಳ, ಕೋಲಾರ, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಯಾದಗಿರಿ, ರಾಯಚೂರು, ವಿಜಯನಗರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ಒಣಹವೆ ಇರಲಿದೆ.
ಇದನ್ನೂ ಓದಿ: Cyber Crime: ಸೈಬರ್ ವಂಚಕರಿಂದ ಲಕ್ಷಾಂತರ ರೂಪಾಯಿ ಕಳೆದುಕೊಂಡ ಕೂಲಿಕಾರ್ಮಿಕ
ಇನ್ನು ಗುರುವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಣ ಹವೆ ಇತ್ತು. ಬೀದರ್‌ನಲ್ಲಿ ಎರಡು ಸೆಂ.ಮೀ ಮಳೆಯಾಗಿದೆ.