Site icon Vistara News

Weather Report : ಮುಂದಿನ 24 ಗಂಟೆಯಲ್ಲಿ ಭಯಂಕರ ಮಳೆ!

Rain in women

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಬಿರುಗಾಳಿ (Rain News) ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಭಾರಿ ಮಳೆಯ ಎಚ್ಚರಿಕೆ ನಡುವೆಯೂ ಪ್ರತ್ಯೇಕವಾಗಿ ಎರಡು ಜಿಲ್ಲೆಗಳಲ್ಲಿ ಭಯಂಕರ ಮಳೆಯಾಗುವ (Heavy Rain alert) ಸಾಧ್ಯತೆ ಇದೆ.

ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನ ಕೆಲವು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಭರ್ಜರಿ ಮಳೆಯಾಗಲಿದೆ. ರಾಯಚೂರು, ಬೀದರ್‌, ಕಲಬುರಗಿ, ಕೊಪ್ಪಳ, ವಿಜಯಪುರ ಸೇರಿ ದಕ್ಷಿಣ ಒಳನಾಡಿನ ಬಳ್ಳಾರಿ, ಹಾಸನ, ಚಿತ್ರದುರ್ಗ ಜಿಲ್ಲೆಯಲ್ಲೂ ಅಬ್ಬರದ ಮಳೆ ಸುರಿಯಲಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Rain News : ಸೇತುವೆ ಮುಳುಗಡೆ, ವೃದ್ಧೆಗೆ ಅನಾರೋಗ್ಯ; ಟ್ರ್ಯಾಕ್ಟರ್‌ನಲ್ಲೇ ಆಸ್ಪತ್ರೆಗೆ ರವಾನೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ನಡುವೆಯೂ ವಿಜಯಪುರದಲ್ಲಿ ಭೂಕಂಪ!

ನಿರಂತರ ಜಿಟಿ ಜಿಟಿ ಮಳೆ ಮಧ್ಯೆಯೂ ವಿಜಯಪುರದಲ್ಲಿ ಭೂಕಂಪನದ ಅನುಭವ ಆಗಿದೆ. ಭೂಮಿ ನಡುಗಿದ ಅನುಭವವಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಭೂಕಂಪವಾಗಿದೆ. ಬೆಳಗ್ಗೆ 9-55ಕ್ಕೆ ಭೂಕಂಪನದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ 2.4 ಭೂಕಂಪನ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಆಗಾಗ ಸಂಭವಿಸುವ ಭೂಕಂಪನಕ್ಕೆ ಮನೆ ಗೋಡೆಗಳು ಬಿರುಕು ಬಿಟ್ಟಿವೆ. ಇದೀಗ ಜಿಟಿ ಜಿಟಿ ಮಳೆಗೆ ನೆನದು ಮನೆಯ ಮೇಲ್ಛಾವಣಿ ಕುಸಿಯುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version