ಬೆಂಗಳೂರು: ರಾಜ್ಯದಲ್ಲಿ 5 ದಿನಗಳು ಕರಾವಳಿ ಸೇರಿದಂತೆ ಮಲೆನಾಡಿನಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ (Weather Report) ಇದೆ. ಕೆಲವು ಜಿಲ್ಲೆಗಳಲ್ಲಿ ವಾತಾವರಣವೂ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ ಬಳಿಕ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆ ಹೊತ್ತು ಜಿಟಿ ಜಿಟಿ ಮಳೆಯಾಗಲಿದೆ.
ಕರಾವಳಿಯಲ್ಲಿ ಭರ್ಜರಿ ಮಳೆ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕಡಲ ತೀರದಲ್ಲಿ ಗಾಳಿ ವೇಗವೂ ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಮತ್ತು ಗದಗ, ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ.
ಕೂಲ್ ಕೂಲ್ ಬೆಂಗಳೂರು
ರಾಜಧಾನಿ ಬೆಂಗಳೂರಲ್ಲಿ ಕಳೆದೆರಡು ದಿನಗಳಿಂದ ಥಂಡಿ ವಾತಾವರಣವಿದ್ದು, ಮುಂದಿನ ಐದು ದಿನಗಳು ಇದೆ ರೀತಿ ಮುಂದುವರಿಯಲಿದೆ. ಕೆಲವೊಮ್ಮೆ ಸೂರ್ಯ ಮರೆಯಾದರೆ ವರುಣ ತನ್ನ ಕೃಪೆ ತೋರಿಸಲಿದ್ದಾನೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಕೆಲವೊಮ್ಮೆ ಬಲವಾದ ಗಾಳಿ ಬೀಸಲಿದೆ.
ಇದನ್ನೂ ಓದಿ: Monsoon Fashion: ಮಾನ್ಸೂನ್‌ನಲ್ಲಿ ಟ್ರೆಂಡಿಯಾಗಿರುವ ಡೆನಿಮ್ ಪ್ಯಾಂಟ್ ಸೂಟ್ ಲೇಯರ್ಡ್ ಲುಕ್ ಟ್ರೈ ಮಾಡಿ ನೋಡಿ !
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 29 ಡಿ.ಸೆ – 25 ಡಿ.ಸೆ
ಮಂಗಳೂರು: 28 ಡಿ.ಸೆ – 24 ಡಿ.ಸೆ
ಹೊನ್ನಾವರ: 28 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ