Site icon Vistara News

Weather report : ಕರಾವಳಿಯಲ್ಲಿಂದು ಹೇಗಿರಲಿದೆ ಮುಂಗಾರು ಮಳೆ ದರ್ಬಾರ್‌

Rain New

ಬೆಂಗಳೂರು: ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಮುಂಗಾರು ಆವರಿಸಿದರೂ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿನ ಕೆಲವು ಕಡೆ ಉತ್ತರ ಒಳನಾಡಿನ ಹಲವು ಕಡೆ ಮಳೆ (Weather report) ಇಲ್ಲದಂತಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-55 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ದಾವಣಗೆರೆ ಮತ್ತು ಚಿತ್ರದುರ್ಗದಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಮಳೆಯಾದರೆ, ಉಳಿದ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದ ಉಳಿದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಮಳೆನಾಡಾಯ್ತು ಮಲೆನಾಡು

ಮಲೆನಾಡು ಪ್ರದೇಶವಾದ ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರಲ್ಲಿ ಮಳೆ ಮಾಯ

ಬೆಂಗಳೂರು ಹಾಗೂ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಆಗಾಗ ಬಿಸಿಲು ಬಂದರೂ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Monsoon Food Tips: ಮಳೆಗಾಲದಲ್ಲಿ ಮರೆಯಲೇಬಾರದ ಆಹಾರ ಸಂಗ್ರಹಣೆಯ ನವಸೂತ್ರಗಳಿವು!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 28 ಡಿ.ಸೆ – 23 ಡಿ.ಸೆ
ಹೊನ್ನಾವರ: 29 ಡಿ.ಸೆ- 23 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 21 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version