Site icon Vistara News

Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ

Child Enjoying Rain and Boy walking in rain

ಬೆಂಗಳೂರು: ಇನ್ನರೆಡು ದಿನ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ಗುಡುಗು ಜತೆಗೆ ಬಿರುಗಾಳಿ ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಬೆಂಗಳೂರಲ್ಲಿ ವ್ಯಾಪಕ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್‌; ಖಾನಾಪುರದಲ್ಲಿ ಬಿಗುವಿನ ವಾತಾವರಣ

ನೈರುತ್ಯ ಮುಂಗಾರು ಗುರುವಾರ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಸೇಡಂನಲ್ಲಿ 7 ಸೆಂ.ಮೀ ಮಳೆಯಾಗಿದೆ. ಚಿಂಚೋಳಿ, ಸುಲೇಪೇಟದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕದ್ರಾ, ಚಿತ್ತಾಪುರ, ಸೈದಾಪುರ, ಇಂಡಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಾರವಾರ, ಮುಧೋಳೆ ಜೇವರ್ಗಿ, ಶಹಾಪುರ, ಬೆಂಗಳೂರು ನಗರ, ಕುಣಿಗಲ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಕ್ಯಾಸಲ್ ರಾಕ್, ಗೇರ್ಸೊಪ್ಪ, ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ ಕಟ್ಕೋಲ್ , ದೇವದುರ್ಗ , ಧಾರವಾಡ, ಕುಂದಗೋಳ , ಬೀದರ್ PTO, ಬೀದರ್, ಔರಾದ್ , ದೇವರಹಿಪ್ಪರಗಿ , ಶ್ರೀರಂಗಪಟ್ಟಣ ಹಾಗೂ ಪೊನ್ನಂಪೇಟೆ, ಬೆಂಗಳೂರು ಹಾಲ್ ವಿಮಾನ ನಿಲ್ದಾಣ ತಲಾ 1 ಸೆಂ. ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version