ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ರಾಜ್ಯಾದ್ಯಂತ ಚುರುಕಾಗಿದ್ದು, ಬಹುತೇಕ ಕಡೆಗಳಲ್ಲಿ ಭಾರಿ (Rain News) ಮಳೆಯಾಗುತ್ತಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (weather report) ನೀಡಿದೆ. ಕರಾವಳಿಯಲ್ಲಿ ಮಳೆ ಅಬ್ಬರ ಇದ್ದರೆ, ಮಲೆನಾಡು ಹಾಗೂ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ.
ಈ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ
ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ಅತ್ಯಂತ ಜೋರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗಿನ ಅಬ್ಬರ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಗದಗ: 27 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 21 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 27 ಡಿ.ಸೆ – 26 ಡಿ.ಸೆ
ಮಂಗಳೂರು: 26 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 26 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ