ಬೆಂಗಳೂರು: ಮೋಚಾ ಚಂಡಮಾರುತ ಎಫೆಕ್ಟ್‌ನಿಂದಾಗಿ ಇಂದು (ಮೇ 13) ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Rains) ನೀಡಿದೆ. ಬೆಂಗಳೂರು ನಗರ, ಉತ್ತರ ಕನ್ನಡ, ಉಡುಪಿ ಹಾಗೂ ಕೋಲಾರದಲ್ಲಿ ಧಾರಾಕಾರ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಇಲಾಖೆ (Weather report) ಅಲರ್ಟ್ ನೀಡಿದೆ.
ಈ ನಾಲ್ಕು ಜಿಲ್ಲೆಗಳಲ್ಲಿ ಗಾಳಿಯ ವೇಗವು 30-40 ಕಿ.ಮೀ ಇರಲಿದ್ದು, ಬಿರುಗಾಳಿ ಎದ್ದೇಳುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಎಲೆಕ್ಟ್ರಾನಿಕ್ ವಸ್ತುಗಳನ್ನು ಮತ್ತು ಅಪ್ಲಯನ್ಸ್‌ಗಳನ್ನು ಅನ್‌ಪ್ಲಗ್ ಅಥವಾ ಸ್ವಿಚ್ಡ್‌ಆಫ್ ಮಾಡುವಂತೆ ಎಚ್ಚರಿಕೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಶಾರ್ಟ್ ಸರ್ಕ್ಯೂಟ್ ಆಗಿ ಹಾಳಾಗುವ ಸಂಭವ ಹೆಚ್ಚಿರುತ್ತದೆ.
ಗ್ರಾಮೀಣ ಭಾಗದಲ್ಲಿ ರೈತರು, ಕುರಿಗಾಹಿಗಳು ಮಳೆ ಬಂತೆಂದು ಮರದಡಿ ಆಶ್ರಯ ಪಡೆಯದಂತೆ ಸೂಚನೆ ನೀಡಲಾಗಿದೆ. ಇದರಿಂದ ಸಿಡಿಲು ಬಡಿದು ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇದೆ. ವಾಹನ ಚಲಾಯಿಸುವಾಗ ಜಾಗೂರುಕತೆಯಿಂದ ಇರುವಂತೆ ತಿಳಿಸಲಾಗಿದೆ.
ಇದನ್ನೂ ಓದಿ: Karnataka Election 2023: ಮತಎಣಿಕೆ ದಿನ 144 ಸೆಕ್ಷನ್ ಜಾರಿ; ಮೆರವಣಿಗೆ ಮಾಡುವಂತಿಲ್ಲ, ಪಟಾಕಿ ಹೊಡೆಯುವಂತಿಲ್ಲ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.