Site icon Vistara News

Weather Report: ಮುಂದಿನ 3 ದಿನ ಬಿರುಗಾಳಿ ಸಹಿತ ಭಾರಿ ಮಳೆ; ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ

Rain alert

Rain Effect

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ (Rain News) ಜೋರಾಗಿದೆ. ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಭಾರಿ ಮಳೆಯಾಗುವ ಎಚ್ಚರಿಕೆಯನ್ನು (Rain alert) ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ ಸೇರಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡುಗು, ಮಿಂಚಿನ ಭಾರಿ (Weather Report) ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Rain News: ಮಳೆ ಅಬ್ಬರ, ರಸ್ತೆ ಕಾಣದೆ ಬಿದ್ದ ಬೈಕ್‌ ಸವಾರ, ಗಾಳಿಗೆ ಹಾರಿ ಹೋದ ಮದುವೆ ಶಾಮಿಯಾನ

ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿಯ ಅಥಣಿಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾನೆ. ಕುರಿ ಮೇಯಿಸುವಾಗ ಸಿಡಿಲು ಬಡಿದಿದ್ದು, ಅಮೂಲ್ ಜಯಸಿಂಗ ಕಾನಡೆ (24) ಎಂಬಾತ ಮೃತಪಟ್ಟಿದ್ದಾನೆ. ಯುವಕನ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಥಣಿಯ ದೇಸಾಯರಹಟ್ಟಿಯಲ್ಲಿ ಹೊಲಕ್ಕೆ ಹೋಗಿದ್ದ ಮಹಿಳೆಯೊಬ್ಬರು ಸಿಡಿಲು ಬಿಡಿದು ಮೃತಪಟ್ಟಿದ್ದಾರೆ. ವಿಠಾಬಾಯಿ ಕುಂಬಾರ(55) ದೇಸಾಯರ ಹಟ್ಟಿ ನಿವಾಸಿ ಆಗಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version