Site icon Vistara News

Weather Report | ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಕೊಡಗು, ಮೈಸೂರು ಸೇರಿ ಇನ್ನೂ 3 ಕಡೆ ಯೆಲ್ಲೋ ಅಲರ್ಟ್‌

rain

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ದಕ್ಷಿಣ ಒಳನಾಡು ಸೇರಿ ಕರಾವಳಿಯಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆಯಿಂದ ಕೂಡಿರಲಿದೆ.

ಮುಂದಿನ 24 ಗಂಟೆಯಲ್ಲಿ ಕೊಡಗು, ಮೈಸೂರು, ಚಿಕ್ಕಮಗಳೂರು ಸೇರಿ ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿಯೂ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಬೆಳಗಿನ ಜಾವ ಮಂಜಿನಿಂದ ಕೂಡಿದ, ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 23 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಶನಿವಾರ ಕೊಳ್ಳೇಗಾಲ, ಹರದನಹಳ್ಳಿಯಲ್ಲಿ 3 ಸೆಂ.ಮೀ, ಶ್ರೀಮಂಗಲದಲ್ಲಿ 2 ಸೆಂ.ಮೀ, ಮೈಸೂರು, ಮಳವಳ್ಳಿ, ಹುಡಕೆರೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ | Nalini Sriharan | ರಾಜೀವ್‌ ಗಾಂಧಿ ಹತ್ಯೆ ಕೇಸ್‌ನಲ್ಲಿ ಜೈಲಿನಿಂದ ಹೊರಬಂದ ನಳಿನಿ ಶ್ರೀಹರನ್‌ ಹೇಳಿದ್ದೇನು?

Exit mobile version