ಬೆಂಗಳೂರು: ಕರಾವಳಿಯ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ (Weather Report) ಘೋಷಣೆ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ| Weather Report | ದುರ್ಬಲಗೊಂಡ ಮುಂಗಾರು: ಮಳೆ ಅಬ್ಬರದಿಂದ ಕೊಂಚ ರಿಲೀಫ್
ಜುಲೈ 23ರಂದು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ | Rain News | ಮಳೆ ಕಡಿಮೆಯಾದರೂ ನಿಲ್ಲದ ಹಾನಿ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ