ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವರುಣ ಅಬ್ಬರಿಸಲಿದ್ದಾನೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಕೋಲಾರ, ಮೈಸೂರು, ಚಾಮರಾಜನಗರ ಹಾಗೂ ಕೊಡಗು, ಚಿಕ್ಕಮಗಳೂರು, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಬಾಗಲಕೋಟೆ, ಗದಗದಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶದ ಮುನ್ಸೂಚನೆ
ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ಸಮಯದಲ್ಲಿ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Varicose Ulcer : 1 ಗಂಟೆಗೂ ಹೆಚ್ಚು ಕಾಲ ನಿಂತೇ ಇರ್ತಿರಾ? ವೇರಿಕೋಸ್ ವೇನ್ಸ್ ನಿಮಗೆ ಕ್ಲೋಸ್ ಆಗುತ್ತೆ ಹುಷಾರ್!
ಶುಕ್ರವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ