ಬೆಂಗಳೂರು: ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಮಲೆನಾಡಲ್ಲಿ ಜಿಟಿ ಜಿಟಿ ಮಳೆ (Weather report) ಇರಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಲ್ಲಿ ಸಾಧಾರಣ
ಉತ್ತರ ಒಳನಾಡಿನ ಜಿಲ್ಲೆಯಾದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಗದಗ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಲ್ಲಿ ಅತ್ಯಂತ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಒಳನಾಡಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಜತೆಗೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ. ಪ್ರವಾಸಿಗರು ಸುರಕ್ಷಿತವಾಗಿ ಇರುವಂತೆ ಎಚ್ಚರಿಸಲಾಗಿದೆ.
ಬೆಂಗಳೂರಲ್ಲಿ ಅಲ್ಲಲ್ಲಿ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮುಂಜಾನೆ ಬಿಸಿಲು ಇದ್ದರೆ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಲಘು ಮಳೆಯ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ನೆಲ ಗಾಳಿಯು ಬೀಸಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 31 ಡಿ.ಸೆ – 21 ಡಿ.ಸೆ
ಮಂಗಳೂರು: 28 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಹೊನ್ನಾವರ: 30 ಡಿ.ಸೆ- 23 ಡಿ.ಸೆ
ಕಲಬುರಗಿ: 31 ಡಿ.ಸೆ – 24 ಡಿ.ಸೆ
ಬೆಳಗಾವಿ: 27ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ
ಇದನ್ನೂ ಓದಿ : Basavaraja Bommai : ನೋ ವೇ, ಚಾನ್ಸೇ ಇಲ್ಲ; ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದ ಬಸವರಾಜ ಬೊಮ್ಮಾಯಿ
ಸೆಪ್ಟೆಂಬರ್ 10ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 21.33 | 3415 | 3302 |
ಆಲಮಟ್ಟಿ ಜಲಾಶಯ (Almatti Dam) | 519.6 | 116.20 | 0 | 11701 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.65 | 194 | 277 |
ಘಟಪ್ರಭಾ ಜಲಾಶಯ (Ghataprabha Dam) | 662.91 | 41.64 | 601 | 180 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 70.58 | 1581 | 10256 |
ಭದ್ರಾ ಜಲಾಶಯ (Bhadra Dam) | 657.73 | 44.90 | 397 | 2584 |
ಕಬಿನಿ ಜಲಾಶಯ (Kabini Dam) | 696.13 | 14.35 | 6572 | 1100 |
ಹಾರಂಗಿ (Harangi Dam) | 871.38 | 7.63 | 2404 | 100 |
ಲಿಂಗನಮಕ್ಕಿ (Linganamakki Dam) | 554.44 | 67.62 | 3937 | 3885 |
ಹೇಮಾವತಿ (Hemavathi Dam) | 890.58 | 20.81 | 759 | 6030 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ