Site icon Vistara News

Weather Report | ಕರಾವಳಿ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿನಲ್ಲಿ ಮೋಡ ವಾತಾವರಣ

rain

ಬೆಂಗಳೂರು: ಕರಾವಳಿಯಲ್ಲಿ ಜು.18, 19ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ತಜ್ಞರು ಆರೆಂಜ್‌ ಅಲರ್ಟ್‌ ಘೋಷಿಸಿದ್ದಾರೆ. ಮೊದಲ ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ಮತ್ತು ಬೀದರ್‌ಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಉಳಿದಂತೆ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡುಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರಿಗೆ ಮಳೆರಾಯನ ಬಿಡುವು

ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದ್ದು, ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದೆ. ಬೆಂಗಳೂರು ಹೊರವಲಯದಲ್ಲಿ ಹಗುರದಿಂದ ಮಧ್ಯಮ ಮಟ್ಟದಲ್ಲಿ ಮಳೆಯಾಗಲಿದೆ.

Exit mobile version