ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಾತ್ರ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಜು.17ರಂದು ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ.
ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಯಾದ ರಾಮನಗರ, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ (dry weather) ಇರಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ಮುಂಗಾರು
ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿ ತಿಂಗಳು ಕಳೆದರೂ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಯ ಮಳೆಯಾಗಿಲ್ಲ. ಸೋಮವಾರದಂದು ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 28 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ