Site icon Vistara News

Weather Report : ಕರಾವಳಿ ಸೇರಿ ಈ 9 ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ

Rain news

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Weather report) ಸುರಿಯಲಿದೆ. ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.

ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸೋನೆ ಮಳೆಯಿಂದ ಶುರುವಾಗಿ ವ್ಯಾಪಕವಾಗಿ ಇರಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರನ ಇರಲಿದೆ.

ಇದನ್ನೂ ಓದಿ: Anekal News : ವೀರಾಂಜನೇಯನಿಗೆ ಕೈ ಮುಗಿದು ದೇವಸ್ಥಾನದ ಹೊಸ್ತಿಲಿಗೆ ತಲೆ ಇಟ್ಟು ಪ್ರಾಣ ಬಿಟ್ಟ ಕೋತಿ!

ಬೆಳಗಾವಿಯಲ್ಲಿ ಅಬ್ಬರದ ಮಳೆ

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಬೀದರ್, ಬಾಗಲಕೋಟೆ ಮತ್ತು ಧಾರವಾಡದಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಆರೆಂಜ್‌-ಯೆಲ್ಲೋ ಅಲರ್ಟ್‌

ಹವಾಮಾನ ಇಲಾಖೆಯು ಇನ್ನೆರಡು ದಿನ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಿದೆ. ಆರೆಂಜ್ ಅಲರ್ಟ್ ಪ್ರಕಾರ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆ (115.6 ರಿಂದ 204.4 ಮಿ.ಮೀ) ಸಾಧ್ಯತೆಯಿದೆ. ಯೆಲ್ಲೋ ಅಲರ್ಟ್‌ ಭಾರಿ ಮಳೆ (64.5 ಮಿಮೀ) ಸಾಧ್ಯತೆಯಿದೆ. ಜು.19-20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೇ ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version