Site icon Vistara News

Weather Report : ಮುಂದಿನ 48 ಗಂಟೆಯಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಗ್ಯಾರಂಟಿ!

Girl standing in Road and enjoying Rain

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಇನ್ನೆರಡು ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಭಾರಿ ಮಳೆ(Rain News) ನಿರೀಕ್ಷೆ ಇದ್ದರೆ, ಮಲೆನಾಡು ಹಾಗೂ ಒಳನಾಡಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ (Weather report) ಮಳೆಯಾಗಲಿದೆ.

ಮಲೆನಾಡು, ಕರಾವಳಿಯಲ್ಲಿ ಮಳೆ ಅಬ್ಬರ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳದಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆ ಅಬ್ಬರ ಇರಲಿದೆ.

ಒಳನಾಡಲ್ಲಿ ಲಘು ಮಳೆಗೆ ಸೀಮಿತ

ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಪ್ರದೇಶದ ಉಳಿದ ಭಾಗಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗಲಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗುವ ಸಂಭವವಿದೆ. ಧಾರವಾಡ, ಹಾವೇರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ.

ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 16ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.8336614738
ಆಲಮಟ್ಟಿ ಜಲಾಶಯ
(Almatti Dam)
519.6114.734166405
ಮಲಪ್ರಭಾ ಜಲಾಶಯ (Malaprabha Dam)633.8021.540194
ಘಟಪ್ರಭಾ ಜಲಾಶಯ
(Ghataprabha Dam)
662.9142.031172184
ತುಂಗಾಭದ್ರಾ ಜಲಾಶಯ (Tungabhadra Dam)497.7166.35177810285
ಭದ್ರಾ ಜಲಾಶಯ (Bhadra Dam)657.7343.876622491
ಕಬಿನಿ ಜಲಾಶಯ (Kabini Dam)696.1314.9540393490
ಹಾರಂಗಿ
(Harangi Dam)
871.388.2715971800
ಲಿಂಗನಮಕ್ಕಿ (Linganamakki Dam) 554.4466.5462666186
ಹೇಮಾವತಿ
(Hemavathi Dam)
890.5818.168946050

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version