Site icon Vistara News

Weather Report : ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಮೀನುಗಾರರೇ ಇರಲಿ ಎಚ್ಚರ

rain image fisheries

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ (Weather report) ಸಾಧ್ಯತೆಯಿದೆ.

ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ವರುಣ ಗುಡುಗಲಿದ್ದಾನೆ. ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಿನ ಭಾಗವಾದ ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಹಳ ಜಿಟಿ ಜಿಟಿ ಮಳೆಯಾಗಲಿದೆ.

ಮುಂದಿನ 48 ಗಂಟೆಯಲ್ಲಿ ರಾಜ್ಯದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Mobile Tower : ಬೆತ್ತಲಾಗಿ ಟವರ್‌ ಏರಿದ; ಗುಟ್ಕಾ ಪ್ಯಾಕೆಟ್‌ ಕಂಡೊಡನೆ ಸರಸರನೇ ಕೆಳಗಿದ!

ಉಡುಪಿ, ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆ

ಜು.7ರಂದು ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಅತಿ ಹೆಚ್ಚು ಮಳೆಯು ಉಡುಪಿ ಜಿಲ್ಲೆಯ ಕೊಲ್ಲೂರಲ್ಲಿ 15 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ 13 ಸೆಂ.ಮೀ , ಗೇರುಸೊಪ್ಪದಲ್ಲಿ 12 ಸೆಂ.ಮೀ ಮಳೆಯಾಗಿದೆ.‌

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version