Site icon Vistara News

Weather report : ಮಳೆಗೆ ಕರಾವಳಿ ತತ್ತರ; ಉತ್ತರ ಒಳನಾಡಿನಲ್ಲಿ ನಿರುತ್ತರ

Rain News

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೊಂದು ವಾರ ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜು.11ರಂದು ರಾಜ್ಯದ 13 ಜಿಲ್ಲೆಗಳಿಗೆ ಮಳೆ ಮುನ್ಸೂಚನೆಯನ್ನು (Weather report) ನೀಡಲಾಗಿದೆ. ಕರಾವಳಿ ಭಾಗದಲ್ಲಿ ವರುಣ ಗುಡುಗಿದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವೊಮ್ಮೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka live news: Heart Attack: ಖ್ಯಾತ ವಿಜ್ಞಾನಿ ಕಸ್ತೂರಿರಂಗನ್‌ಗೆ ಹೃದಯಾಘಾತ; ಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್‌

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವು ಕಡೆ ಮಾತ್ರ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ವರುಣ

ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬಳ್ಳಾರಿಯಲ್ಲಿ ಮಾತ್ರ ಮಳೆ ಅಬ್ಬರ ಇರಲಿದ್ದು, ಈ ಉಳಿದ ಜಿಲ್ಲೆಗಳಲ್ಲಿ ಮುಂಗಾರು ಮಳೆ ದುರ್ಬಲಗೊಂಡಿದೆ. ಕೆಲವು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version