ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Southwest monsoon) ಸಕ್ರಿಯಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಭಾಗವಾದ ದಾವಣಗೆರೆಯಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿಯಲ್ಲಿ ಗುಡುಗು, ಮಿಂಚು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಧಾರವಾಡ ಮತ್ತು ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ತುಂತುರ ಮಳೆಯಾಗಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ 27 ಮತ್ತು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಜು.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನಲ್ಲಿ ಬಿರುಗಾಳಿ ವೇಗವು ಗಂಟೆಗೆ 40-55 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Rain News : ಭಾರಿ ಮಳೆಗೆ ಸೋರುತಿಹುದು ಸುರಂಗ ಮಾಳಿಗೆ; ಗುಡ್ಡದ ಮಣ್ಣು ಕುಸಿತ
ಅಲರ್ಟ್ ಘೋಷಣೆ ಹೇಗೆ?
ರೆಡ್ ಅಲರ್ಟ್ ಎಂದರೆ 204 mm ಗೂ ಹೆಚ್ಚು ಮಳೆಯ ಮುನ್ಸೂಚನೆ ಇದ್ದರೆ, ಆರೆಂಜ್ ಅಲರ್ಟ್‌ನಲ್ಲಿ 115 mm ರಿಂದ 204 mm ಮಳೆಯ ಆಗಲಿದೆ. ಯೆಲ್ಲೋ ಅಲರ್ಟ್ ಅಂದರೆ 64.5 mm ಇಂದ 115.5 mm ಮಳೆಯ ಮುನ್ಸೂಚನೆ ಆಗಿದೆ. ಸದ್ಯ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆ ಪ್ರಮಾಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ 213.5 Mm, ಜಾಲ್ಸೂರು 176 Mm, ಸರಪಾಡಿ 167 Mm ಮಳೆಯಾಗಿದೆ. ಕೊಡಗಿನ ಭಾಗಮಂಡಲದಲ್ಲಿ 23 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ