ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ (Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 40-45 ಕಿ.ಮೀ. ಇರಲಿದ್ದು, 55 ಕಿ.ಮೀ ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಜಿಟಿ ಜಿಟಿ ಮಳೆಯೊಂದಿಗೆ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ ಹಾಗೂ ರಾಮನಗರ, ಚಾಮರಾಜನಗರ ಸೇರಿದಂತೆ ರಾಯಚೂರಿನ ಕೆಲವು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಉಷ್ಣಾಂಶದಲ್ಲೂ ಏರಿಕೆ
ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಮಳೆಯಾದರೂ, ಹಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: Road Accident: ಕಾರಿಗೆ ಹಿಂಬದಿಯಿಂದ ಗುದ್ದಿದ ಲಾರಿ; ನಾಲ್ವರು ಸ್ಥಳದಲ್ಲೇ ಸಾವು
ಪ್ರಮುಖ ನಗರಗಳಲ್ಲಿನ ಇಂದಿನ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 28 ಡಿ.ಸೆ
ಗದಗ: 37 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 36 ಡಿ.ಸೆ – 22 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 35 ಡಿ.ಸೆ – 27 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 23 ಡಿ.ಸೆ
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ