Site icon Vistara News

Weather report : ಬೆಂಗಳೂರು ಸೇರಿ ಕರಾವಳಿಯಲ್ಲಿಂದು ಮಳೆ ಚುರುಕು

girl standing in beach

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ (Weather report) ಮಳೆಯಾಗಲಿದೆ.

ಮುಂದಿನ 48 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.

ಸಮುದ್ರಕ್ಕೆ ಇಳಿಯುವಂತಿಲ್ಲ!

ಸೆ.19-20ರಂದು ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

ಬೆಂಗಳೂರಲ್ಲಿ ಭರ್ಜರಿ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರ ಒಳನಾಡಲ್ಲಿ ದುರ್ಬಲಗೊಂಡಿದ್ದ ಮುಂಗಾರು

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಕೋಟದಲ್ಲಿ 5 ಸೆಂ.ಮೀ ಮಳೆಯಾಗಿದ್ದು, ಕೊಟ್ಟಿಗೆಹಾರದಲ್ಲಿ 4 ಹಾಗೂ ಕಾರವಾರ, ಉಡುಪಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಮಂಚಿಕೆರೆ, ಅಂಕೂಲ, ಕಾರ್ಕಳ, ಬೆಳ್ತಂಗಡಿ, ಹೊಸಕೋಟೆ, ದೇವನಹಳ್ಳಿ, ಚಿಕ್ಕಬಳ್ಳಾಪುರ, ಮಾಲೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಧರ್ಮಸ್ಥಳ, ಗೇರುಸೊಪ್ಪ, ಯೆಲ್ಲಾಪುರ, ಲೊಂಡ, ಬೆಳಗಾವಿ ನಗರ, ಬಾಗಲಕೋಟೆ, ಬಾಗಲ ಕೂಟೆ ಅಗ್ರೋ, ಕೂಡಲಸಂಗಮ, ಭಾಗಮಂಡಲ, ಜಯಯ್ಪುರ, ಶೃಂಗೇರಿ ಹೆಚ್.ಎಂ. ಎಸ್ , ಕಳಸ, ಪೊನ್ನಂಪೇಟೆ ಪಿ.ಡಬ್ಲೂ .ಡಿ, ಗೌರಿಬಿದನೂರು, ದೊಡ್ಡಬಳ್ಳಾಪುರ, ಬೆಂಗಳೂರು ನಗರ, ಬಿ.ದುರ್ಗದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 32 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 19ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.5129884732
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.500194
ಘಟಪ್ರಭಾ ಜಲಾಶಯ
(Ghataprabha Dam)
662.9142.10317181
ತುಂಗಾಭದ್ರಾ ಜಲಾಶಯ (Tungabhadra Dam)497.7164.88173910246
ಭದ್ರಾ ಜಲಾಶಯ (Bhadra Dam)657.7343.546852490
ಕಬಿನಿ ಜಲಾಶಯ (Kabini Dam)696.1314.9737223490
ಹಾರಂಗಿ
(Harangi Dam)
871.388.2319111800
ಲಿಂಗನಮಕ್ಕಿ (Linganamakki Dam) 554.4467.62116532668
ಹೇಮಾವತಿ
(Hemavathi Dam)
890.5817.4732976000

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version