Site icon Vistara News

Weather Report : ಸೆ.10ರವರೆಗೆ ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Heavy Rain alert

ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ಉತ್ತರ ಕರ್ನಾಟಕದಲ್ಲಿ ಬಲವಾಗಿದ್ದರೆ, ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಲ್ಲಿ (Weather report) ದುರ್ಬಲವಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದೆ.

ವಾಯವ್ಯ ಬಂಗಾಳಕೊಲ್ಲಿಯಲ್ಲಿ ಸಮುದ್ರ ಮಟ್ಟದಿಂದ 7.6 ಕಿ.ಮೀ ವರೆಗೆ ಸುಳಿಗಾಳಿ ಎದ್ದಿದೆ. ಇದರಿಂದಾಗಿ ಟ್ರಫ್‌ವೊಂದು ನಿರ್ಮಾಣವಾಗಿದ್ದು, ಇದು ಆಂದ್ರಪ್ರದೇಶದ ಕರಾವಳಿ ಮೂಲಕ ತೆಲಂಗಾಣದವರೆಗೆ ಹಾದುಹೋಗಿದೆ. ಇದರ ಪ್ರಭಾವದಿಂದಾಗಿ ಆಂದ್ರಪ್ರದೇಶಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾವ್ಯಾವ ಜಿಲ್ಲೆಗೆ ಅಲರ್ಟ್‌?

ಸೆಪ್ಟೆಂಬರ್‌ 10ರವರೆಗೆ ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಆದರೆ 6-7ನೇ ತಾರೀಖಿನಂದು ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.

ಉತ್ತರ ಕರ್ನಾಟಕದಲ್ಲಿ ರಣ ಮಳೆ

ಮಳೆಯಿಲ್ಲದೆ ಉತ್ತರ ಕರ್ನಾಟಕ ಭಾಗದಲ್ಲಿ ಬರದ ಪರಿಸ್ಥಿರಿ ನಿರ್ಮಾಣವಾಗಿತ್ತು. ಇದೀಗ ಟ್ರಫ್‌ ಎಫೆಕ್ಟ್‌ನಿಂದಾಗಿ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Dina Bhavishya : ಈ ರಾಶಿಯವರು ಇಂದು ಕೊಂಚ ಕೋಪ ತಗ್ಗಿಸಿಕೊಳ್ಳಿ, ಅದೇ ಮುಳುವಾದೀತು!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 26 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 22 ಡಿ.ಸೆ
ಗದಗ: 24 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 26 ಡಿ.ಸೆ – 23 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 34 ಡಿ.ಸೆ – 26 ಡಿ.ಸೆ

ಸೆಪ್ಟೆಂಬರ್‌ 5ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0422.2841996231
ಆಲಮಟ್ಟಿ ಜಲಾಶಯ
(Almatti Dam)
519.6121.43508615237
ಮಲಪ್ರಭಾ ಜಲಾಶಯ (Malaprabha Dam)633.8021.8801194
ಘಟಪ್ರಭಾ ಜಲಾಶಯ
(Ghataprabha Dam)
662.9141.48597176
ತುಂಗಾಭದ್ರಾ ಜಲಾಶಯ (Tungabhadra Dam)497.7173.785599126
ಭದ್ರಾ ಜಲಾಶಯ (Bhadra Dam)657.7346.014003224
ಕಬಿನಿ ಜಲಾಶಯ (Kabini Dam)696.1313.577941000
ಹಾರಂಗಿ
(Harangi Dam)
871.387.112041735
ಲಿಂಗನಮಕ್ಕಿ (Linganamakki Dam) 554.4468.3029715060
ಹೇಮಾವತಿ
(Hemavathi Dam)
890.5823.107475800
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version