Site icon Vistara News

Weather Report : ಇಂದು 9 ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಬೆಂಗಳೂರಲ್ಲಿ ಕಣ್ಣಾಮುಚ್ಚಾಲೆ

Rain with girl and Dog

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಸಮರ್ಪಕವಾಗಿ ಆಗುತ್ತಿಲ್ಲ. ಆದರೆ, ಕರಾವಳಿ (coastal regions) ಹಾಗೂ ಮಲೆನಾಡು ಭಾಗದ (Malnad regions) ಅಲ್ಲಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು ಉತ್ತರ ಒಳನಾಡಿನ (North Inland) ಕೆಲವೇ ಕೆಲವು ಕಡೆ ಭಾರಿ ಮಳೆ ಸುರಿಯುತ್ತದೆಯಾದರೂ (Rain Alert) ಅದು ನಿರಂತರತೆಯನ್ನು ಕಾಯ್ದುಕೊಳ್ಳುತ್ತಿಲ್ಲ. ಬುಧವಾರ (ಜುಲೈ 19) ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ತಿಳಿಸಿದೆ. ಇನ್ನು ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅತ್ಯಂತ ಮಳೆ ಬೀಳುವ ಪ್ರದೇಶಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದರೆ, ಕರಾವಳಿ ಭಾಗದ ಅಲ್ಲಲ್ಲಿ ಸಾಧಾರಣ ಮಳೆಯಾದರೂ ಬಹುತೇಕ ಕಡೆ ಭರ್ಜರಿಯಾಗಿಯೇ ಸುರಿಯಲಿದೆ ಎಂದು ಅಂದಾಜಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ ವೇಳೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಲಿದೆ.

ಇದನ್ನೂ ಓದಿ: Congress Guarantee : ಜನರಿಗೆ ಮಾತ್ರವಲ್ಲ, ಗ್ಯಾರಂಟಿ ಕಾರ್ಡ್‌ ಹಂಚಿದವರಿಗೂ ಇದೆ ಡಿಕೆಶಿ ಗಿಫ್ಟ್‌!

ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಬೆಳಗಾವಿಯಲ್ಲಿ ಮಳೆ ಅಬ್ಬರ?

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಅಬ್ಬರಿಸಲಿದ್ದು, ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಆದರೆ, ಬೀದರ್, ಬಾಗಲಕೋಟೆ ಮತ್ತು ಧಾರವಾಡದಲ್ಲಿ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಯಾವ ಜಿಲ್ಲೆಗಳಿಗೆ ಆರೆಂಜ್‌-ಯೆಲ್ಲೋ ಅಲರ್ಟ್‌?

ಹವಾಮಾನ ಇಲಾಖೆಯು ಇನ್ನೆರಡು ದಿನ ಕೆಲವು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಿದೆ. ಆರೆಂಜ್ ಅಲರ್ಟ್ ಪ್ರಕಾರ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆ (115.6 ರಿಂದ 204.4 ಮಿ.ಮೀ) ಸಾಧ್ಯತೆಯಿದೆ. ಯೆಲ್ಲೋ ಅಲರ್ಟ್‌ ಭಾರಿ ಮಳೆ (64.5 ಮಿಮೀ) ಸಾಧ್ಯತೆಯಿದೆ.

ಇದನ್ನೂ ಓದಿ: Bangalore Terror : ಬೆಂಗಳೂರು ಸ್ಫೋಟಕ್ಕೆ ಸ್ಕೆಚ್‌ ಹಾಕಿದ್ದ ಶಂಕಿತ ಉಗ್ರರು ಅರೆಸ್ಟ್‌, ಭಯಾನಕ ವಿವರ ಬಹಿರಂಗ

ಜು.19-20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದರೆ, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಭಾಗದವರು ತುಸು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version