Site icon Vistara News

Weather report : ಇನ್ನೊಂದು ವಾರ ಕಾಣೆಯಾಗುವ ಸೂರ್ಯ; ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ

Rain image

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಸೂರ್ಯ ಮರೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಮುಂದಿನ 24 ಗಂಟೆಯೊಳಗೆ ಬೀದರ್‌, ಕಲಬುರಗಿ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು (Weather Update) ನೀಡಲಾಗಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ಜು.16ರವರೆಗೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಅಧಿಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವೊಮ್ಮೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕೆಲವು ಕಡೆ ಮಾತ್ರ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಬಳ್ಳಾರಿಯಲ್ಲಿ ಮಾತ್ರ ಮಳೆ ಅಬ್ಬರ ಇರಲಿದ್ದು, ಈ ಉಳಿದ ಜಿಲ್ಲೆಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದೆ. ಕೆಲವು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.

ಇದನ್ನೂ ಓದಿ: OMG ಸಿನಿಮಾ ಮಾಡುವಾಗ ನಟ ಅಕ್ಷಯ್​ ಕುಮಾರ್​ ನಾನ್​ವೆಜ್​ ತ್ಯಜಿಸಿದ್ದರಂತೆ; ಕಾರಣ ಅವರ ಅಮ್ಮ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 37 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version