Site icon Vistara News

Weather Report : ಬೆಂಗಳೂರಿನಲ್ಲಿಂದು ಭಾರಿ ಮಳೆ; ಕರಾವಳಿಯಲ್ಲೂ ಜೋರು

girl having fun outdoors in rain

ಬೆಂಗಳೂರು: ರಾಜ್ಯದ ಹಲವು ಕಡೆ ಮಾತ್ರ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ಕೆಲವು ಕಡೆ ಗಾಳಿ ಮತ್ತು ಮೋಡ ಕವಿದ ವಾತಾವರಣವಷ್ಟೇ ಇರಲಿದೆ. ಇನ್ನು ಕೆಲವು ಕಡೆ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡ ಹಾಗೂ ಬಿಸಿಲಿನ ಮಿಶ್ರಣ ಇರಲಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ಭರ್ಜರಿಯಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗುವ (Rain News) ಇದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ (South Inland and North Inland) ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ (coastal regions Rainfall) ಬಿರುಗಾಳಿಯು ಗಂಟೆಗೆ 40-45 ಕಿ.ಮೀ. ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ (Alert to fishermen) ಸೂಚಿಸಲಾಗಿದೆ.

girl having fun outdoors in rain

ಬೆಂಗಳೂರಲ್ಲಿ ಭರ್ಜರಿ ಮಳೆ ಸಾಧ್ಯತೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಈ ಮಧ್ಯೆ ಬಿಸಿಲೂ ಬರಲಿದೆ. ಅಲ್ಲದೆ, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Double tragedy : ವಿದ್ಯುತ್‌ ಆಘಾತಕ್ಕೆ ಬಾಲಕ ಬಲಿ, ಟಿಲ್ಲರ್‌ಗೆ ಕಾರು ಡಿಕ್ಕಿ ಹೊಡೆದು ಯುವಕ ದುರ್ಮರಣ

ಸೆಪ್ಟೆಂಬರ್‌ 18ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.5129884732
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.500194
ಘಟಪ್ರಭಾ ಜಲಾಶಯ
(Ghataprabha Dam)
662.9142.10317181
ತುಂಗಾಭದ್ರಾ ಜಲಾಶಯ (Tungabhadra Dam)497.7164.88173910246
ಭದ್ರಾ ಜಲಾಶಯ (Bhadra Dam)657.7343.546852490
ಕಬಿನಿ ಜಲಾಶಯ (Kabini Dam)696.1314.9737223490
ಹಾರಂಗಿ
(Harangi Dam)
871.388.2319111800
ಲಿಂಗನಮಕ್ಕಿ (Linganamakki Dam) 554.4467.62116532668
ಹೇಮಾವತಿ
(Hemavathi Dam)
890.5817.4732976000
Exit mobile version