ಬೆಂಗಳೂರು: ಕರಾವಳಿ, ಮಲೆನಾಡು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತೀವ್ರಗೊಂಡಿದ್ದು, ಉತ್ತರ ಒಳನಾಡಿನಲ್ಲಿ ಕುಂಟುತ್ತಾ (Weather report) ಸಾಗಿದೆ. ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು, ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ (Rain alert) ಮುನ್ಸೂಚನೆಯನ್ನು ನೀಡಲಾಗಿದೆ. ಉಳಿದಂತೆ ಉತ್ತರ ಕನ್ನಡದಲ್ಲಿ ಭಾರಿ (Rain news) ಮಳೆಯಾಗಲಿದೆ.
ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ವರುಣ ಗುಡುಗಲಿದ್ದಾನೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಒಳನಾಡಿನ ಭಾಗವಾದ ಬೆಳಗಾವಿ, ಧಾರವಾಡ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಹಳ ಜಿಟಿ ಜಿಟಿ ಮಳೆಯಾಗಲಿದೆ.
ಮುಂದಿನ 48 ಗಂಟೆಯಲ್ಲಿ ರಾಜ್ಯದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 36 ಡಿ.ಸೆ – 24 ಡಿ.ಸೆ
ಗದಗ: 29 ಡಿ.ಸೆ – 22 ಡಿ.ಸೆ
ಚಿತ್ರದುರ್ಗ:29 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 28 ಡಿ.ಸೆ – 25 ಡಿ.ಸೆ
ಮಂಗಳೂರು: 28 ಡಿ.ಸೆ – 23 ಡಿ.ಸೆ
ಹೊನ್ನಾವರ: 28 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ