ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್ (Weather report) ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ